ದೆಹಲಿಯಲ್ಲಿ ಭಾರೀ ಮಳೆ: ಇಬ್ಬರು ಸಾವು, ಶಾಲಾ ಕಾಲೇಜುಗಳಿಗೆ ರಜೆ, ಸಂಚಾರ ಅಸ್ತವ್ಯಸ್ತ

ದೆಹಲಿಯಲ್ಲಿ ಬುಧವಾರ ಸಂಜೆ ಭಾರೀ ಮಳೆ ಸುರಿದಿದ್ದು, ಭಾರೀ ಅನಾಹುತ ಉಂಟಾಗಿದೆ. ದಿಲ್ಲಿ ನಗರದ ಹೆಚ್ಚಿನ ಭಾಗಗಳು ಜಲಾವೃತಗೊಂಡಿದೆ. ಘಾಜಿಪುರದಲ್ಲಿ 22 ವರ್ಷದ ಮಹಿಳೆ ಮತ್ತು ಆಕೆಯ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಮುಖ ರಸ್ತೆಗಳು ಟ್ರಾಫಿಕ್ ಸಮಸ್ಯೆಗೆ ಒಳಗಾದವು.
ರಾಷ್ಟ್ರೀಯ ಹವಾಮಾನ ಕಚೇರಿ ತನ್ನ ಫ್ಲ್ಯಾಶ್ ಫ್ಲಡ್ ಗೈಡೆನ್ಸ್ ಬುಲೆಟಿನ್ ನಲ್ಲಿ ದೆಹಲಿಯನ್ನು ‘ಹೆಚ್ಚಿನ ಅಪಾಯದ ಪ್ರದೇಶ’ ಎಂದು ಗುರುತಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಅಧಿಕಾರಿಗಳು ಜನರಿಗೆ ಮನೆಯೊಳಗೆ ಇರಲು, ಕಿಟಕಿಗಳು ಮತ್ತು ಬಾಗಿಲುಗಳನ್ನು ಭದ್ರಪಡಿಸಿಕೊಳ್ಳಲು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಲು ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದಾಗಿ 22 ವರ್ಷದ ಮಹಿಳೆ ಮತ್ತು ಆಕೆಯ ಮೂರು ವರ್ಷದ ಮಗು ಜಲಾವೃತವಾದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನುಜಾ ಮತ್ತು ಅವರ ಮಗ ಪ್ರಿಯಾಂಶ್ ಗಾಜಿಪುರ ಪ್ರದೇಶದ ಖೋಡಾ ಕಾಲೋನಿ ಬಳಿಯ ಸಾಪ್ತಾಹಿಕ ಮಾರುಕಟ್ಟೆಗೆ ಭೇಟಿ ನೀಡಿದ್ದರು. ಅವರು ರಾತ್ರಿ ೮ ಗಂಟೆ ಸುಮಾರಿಗೆ ನಿರ್ಮಾಣ ಹಂತದ ಚರಂಡಿಗೆ ಬಿದ್ದಿದ್ದಾರೆ. ಇನ್ನು ಮಳೆಗೆ ಸಂಬಂಧಿಸಿದ ಪ್ರತ್ಯೇಕ ಘಟನೆಗಳಲ್ಲಿ ಇತರ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth