ಮರ್ಡರ್: ಹಾಡಹಗಲೇ ಗುಂಡಿಕ್ಕಿ ಸುಪ್ರೀಂನ ಇಬ್ಬರು ನ್ಯಾಯಮೂರ್ತಿಗಳ ಕೊಲೆ - Mahanayaka
6:38 PM Thursday 29 - January 2026

ಮರ್ಡರ್: ಹಾಡಹಗಲೇ ಗುಂಡಿಕ್ಕಿ ಸುಪ್ರೀಂನ ಇಬ್ಬರು ನ್ಯಾಯಮೂರ್ತಿಗಳ ಕೊಲೆ

18/01/2025

ಸುಪ್ರೀಂಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಟೆಹ್ರಾನ್‌ನಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ.

ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹತ್ಯೆಗೀಡಾದ ನ್ಯಾಯಮೂರ್ತಿಗಳು. ಸುಪ್ರೀಂ ಕೋರ್ಟ್‌ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ವರದಿ ಮಾಡಿವೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ