ದುರಂತ: ಧರಶಾಹಿಯಾದ ಕಟ್ಟಡ: ಇಬ್ಬರು ಸಾವು, 17 ಮಂದಿಗೆ ಗಾಯ

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ 19 ಕಾರ್ಮಿಕರನ್ನು ರಕ್ಷಕರು ಮತ್ತು ಪೊಲೀಸರು ಹೊರತೆಗೆದರು. 19 ಕಾರ್ಮಿಕರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಗಾಯಗೊಂಡ ಕಾರ್ಮಿಕರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವಕಾಂತ್ ಠಾಕೂರ್ ತಿಳಿಸಿದ್ದಾರೆ.
ಪೊಲೀಸರು ಮಾರುಕಟ್ಟೆ ಮಾಲೀಕರು ಮತ್ತು ಗುತ್ತಿಗೆದಾರನನ್ನು ಬಂಧಿಸಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡ ಕಾರ್ಮಿಕರಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth