ರಾಜ್ಯದಲ್ಲಿ 2 ಲಕ್ಷ ಕೋಟಿ ಹೂಡಿಕೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಎರಡು ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದರು.
ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಲಿದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ಅಶ್ವಥ ನಾರಾಯಣ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ,ಮಂಗಳೂರು ಮೇಯರ್ ಜಯಾನಂದ ಅಂಚನ್ ಹಾಗೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























