ಎಂಬಿಬಿಎಸ್ ಕಲಿತು ವೈದ್ಯರಾಗಬೇಕೆಂಬ ಕನಸು ಕಂಡಿದ್ದ ಎರಡು ಜೀವ ಆತ್ಮಹತ್ಯೆ: ರಾಜಸ್ಥಾನದಲ್ಲಿ 2 ತಿಂಗಳಲ್ಲಿ 9 ವಿದ್ಯಾರ್ಥಿಗಳ ಸೂಸೈಡ್..!

28/06/2023

ರಾಜಸ್ಥಾನದ ಕೋಟಾ ಎಂಬಲ್ಲಿ ಎಂಬಿಬಿಎಸ್ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ಘಟನೆಯಲ್ಲಿ ಉದಯಪುರದ 18 ವರ್ಷದ ವೈದ್ಯಕೀಯ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಮೆಹುಲ್ ವೈಷ್ಣವ್ ಎಂದು ಗುರುತಿಸಲಾಗಿದ್ದು, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೆಹುಲ್ ಉದಯಪುರ ಜಿಲ್ಲೆಯ ಸಾಲುಂಬಾರ್ ನಿವಾಸಿಯಾಗಿದ್ದು, ಕಳೆದ ಎರಡು ತಿಂಗಳಿನಿಂದ ಕೋಟಾದ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಈತ ವಿಜ್ಞಾನ್ ನಗರ ಪ್ರದೇಶದ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದ.

ಮೆಹುಲ್ ತನ್ನ ಹಾಸ್ಟೆಲ್ ಕೋಣೆಯಲ್ಲಿ ಏಕಾಂಗಿಯಾಗಿದ್ದ. ಯಾಕೆಂದರೆ ಅವನ ರೂಮ್ ಮೇಟ್ ಆ ರಾತ್ರಿ ಹೊರಗಿದ್ದ. ಅನೇಕ ಗಂಟೆಗಳು ಕಳೆದರೂ ಮೆಹುಲ್ ತನ್ನ ಕೋಣೆಯಿಂದ ಹೊರಬಾರದ್ದನ್ನು ಕಂಡ ಅವನ ಹಾಸ್ಟೆಲ್ ಸಹಪಾಠಿಗಳು ಉಸ್ತುವಾರಿಗೆ ಮಾಹಿತಿ ನೀಡಿದ್ದಾರೆ.

ಕೇರ್ ಟೇಕರ್ ಬಾಗಿಲು ಒಡೆದ ನಂತರ ಮೆಹುಲ್ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದೇ ರೀತಿಯ ಘಟನೆಯಲ್ಲಿ, ವೈದ್ಯಕೀಯ ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಇನ್ನೊಬ್ಬ ಕೋಚಿಂಗ್ ವಿದ್ಯಾರ್ಥಿ ಕೂಡಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿಯನ್ನು ಆದಿತ್ಯ ಎಂದು ಗುರುತಿಸಲಾಗಿದ್ದು, ಸುಮಾರು ಎರಡು ತಿಂಗಳ ಹಿಂದೆ ಕೋಟಾಕ್ಕೆ ಬಂದಿದ್ದ. ಕಳೆದೆರಡು ತಿಂಗಳಲ್ಲಿ ರಾಜಸ್ಥಾನದ ಕೋಟಾದಲ್ಲಿ ಒಟ್ಟು ಒಂಬತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಐದು ಪ್ರಕರಣಗಳು ಮೇ ತಿಂಗಳಲ್ಲಿ ನಡೆದಿತ್ತು. ಈ ವರ್ಷ ಜೂನ್ ನಲ್ಲಿ ನಾಲ್ಕು ಪ್ರಕರಣಗಳು ನಡೆದಿತ್ತು.

ಮೃತ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳು ತೆಗೆದುಕೊಂಡ ಇಂತಹ ತೀವ್ರ ಕ್ರಮಗಳ ಹಿಂದಿನ ಕಾರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ವರದಿಗಳ ಪ್ರಕಾರ, ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಒತ್ತಡದಿಂದ ಈ ರೀತಿ ಕೃತ್ಯ ನಡೆಸಿದ್ದಾರೆಯೇ ಎಂದು ಶಂಕಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version