ಪಾಕ್ ಸೇನೆಯ ಅಪ್ರಚೋದಿತ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮ
27/11/2020
ಜಮ್ಮು, ಕಾಶ್ಮೀರ: ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿ ಪರಿಣಾಮ ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಪಾಕಿಸ್ತಾನ ಸೇನೆಯು ರಾಜೌರಿಯ ಸುಂದರಬಾನಿ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಈ ಸಂದರ್ಭ ಸೇನೆಯ ಯೋಧ ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಮತ್ತು ರೈಫಲ್ ಮೇನ್ ಸುಖ್ಬೀರ್ ಸಿಂಗ್ ಹುತಾತ್ಮರಾಗಿದ್ದಾರೆ.
ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿಗೆ ತಕ್ಷಣವೇ ಭಾರತದ ಸೇನೆ ಪ್ರತಿಕ್ರಿಯಿಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.