ಹಕ್ಕಿ ಜ್ವರದಿಂದ 2 ವರ್ಷದ ಹೆಣ್ಣು ಮಗು ಸಾವು

ಅಮರಾವತಿ: ಹಕ್ಕಿ ಜ್ವರದಿಂದ 2 ವರ್ಷದ ಹೆಣ್ಣು ಮಗುವೊಂದು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆಯಲ್ಲಿ ನಡೆದಿದೆ.
ಮಾರ್ಚ್ 15ರಂದು ಮಗು ಸಾವನ್ನಪ್ಪಿತ್ತು. ಮಗುವಿನ ಸ್ಯಾಂಪಲ್ ಅನ್ನು ಪುಣೆ ಮೂಲದ ರಾಷ್ಟ್ರೀಯ ವೈರಾಲಜಿಗೆ ಕಳುಹಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಮಗು ಹಕ್ಕಿಜ್ವರದಿಂದ ಮೃತಪಟ್ಟಿರುವುದು ಧೃಡಪಟ್ಟಿದೆ.
ಮಂಗಳಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ಮಗು ಚಿಕಿತ್ಸೆ ಪಡೆಯುತ್ತಿತ್ತು. ಪಲ್ನಾಡು ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರದ ಪ್ರಕರಣ ವರದಿಯಾಗದಿದ್ದರೂ, ಮಗುವಿಗೆ ಹೇಗೆ ಸೋಂಕು ತಗುಲಿತು ಎನ್ನುವುದು ತಿಳಿದು ಬಂದಿಲ್ಲ.
ಮಗು ಹಸಿ ಕೋಳಿಮಾಂಸದ ತುಂಡುಗಳನ್ನು ತಿನ್ನುತ್ತಿತ್ತು. ರೋಗ ಲಕ್ಷಣ ಕಾಣಿಸುವ ಮೊದಲೂ ಒಂದು ತುಂಡು ಮಾಂಸ ತಿಂದಿದ್ದಳು. ಹೀಗಾಗಿ ಆಕೆಗೆ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ.
ಮಗುವಿನ ಕುಟುಂಬಸ್ಥರನ್ನು ಪರೀಕ್ಷೆಗೊಳಪಡಿಸಲಾಗಿದೆ. ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7