ಪ್ರಜ್ವಲ್ ರೇವಣ್ಣ ವಿರುದ್ಧ 2 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

prajwal revanna
23/08/2024

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದನ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್‌ ಐಟಿ ಅಧಿಕಾರಿಗಳು ಕೋರ್ಟ್ ಗೆ 2000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 123 ಸಾಕ್ಷ್ಯಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಎಸ್‌ ಐಟಿ ತನಿಖಾಧಿಕಾರಿ ಸುಮಾರಾಣಿ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸಿಪುರ ಟೌನ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ ಐಟಿಗೆ ವಹಿಸಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version