2008ರ ಮುಂಬೈ ಭಯೋತ್ಪಾದಕ ದಾಳಿ: ಆರೋಪಿ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೇರಿಕ ಒಪ್ಪಿಗೆ - Mahanayaka
11:57 AM Wednesday 19 - March 2025

2008ರ ಮುಂಬೈ ಭಯೋತ್ಪಾದಕ ದಾಳಿ: ಆರೋಪಿ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೇರಿಕ ಒಪ್ಪಿಗೆ

14/02/2025

2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೇರಿಕ ಒಪ್ಪಿಗೆ ಕೊಟ್ಟಿದೆ. ಪ್ರಧಾನಿ ಮೋದಿ ಸಮ್ಮುಖದಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ ಮಾಡಿದ್ದಾರೆ.ಭಾರತ ಹಲವು ವರ್ಷಗಳಿಂದ ಆತನನ್ನು ಹಸ್ತಾಂತರಿಸುವಂತೆ ಕೋರುತ್ತಿದೆ.


Provided by

ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಭೇಟಿಯನ್ನು ಪ್ರಧಾನಿ ಮೋದಿ ಮಾಡಿದ್ದಾರೆ.

ಪ್ರಧಾನಿ ಮೋದಿ ಯವರ ಜೊತೆ ದ್ವಿಪಕ್ಷೀಯ ಮಾತುಕತೆ ನಂತರ ನಾವು 26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿಯಾಗಿರುವ ಅತ್ಯಂತ ಅಪಾಯಕಾರಿ ವ್ಯಕ್ತಿಯನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದೇವೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.


Provided by

26/11 ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಪ್ರಸ್ತುತ ಅಮೆರಿಕದಲ್ಲಿ ಹೆಚ್ಚಿನ ಭದ್ರತೆಯ ಜೈಲಿನಲ್ಲಿದ್ದಾನೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ