ಒಡಿಶಾ ರೈಲು ದುರಂತ: ಸಾವನ್ನಪ್ಪಿದವರ ಸಂಖ್ಯೆ 233 ಕ್ಕೇರಿಕೆ - Mahanayaka

ಒಡಿಶಾ ರೈಲು ದುರಂತ: ಸಾವನ್ನಪ್ಪಿದವರ ಸಂಖ್ಯೆ 233 ಕ್ಕೇರಿಕೆ

03/06/2023

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233 ಕ್ಕೇರಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇವರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಈ ರೈಲಿನ ಮೂರು- ನಾಲ್ಕು ಬೋಗಿಗಳೂ ಹಳಿ ತಪ್ಪಿದವು. ಗೂಡ್ಸ್ ರೈಲು ಕೂಡಾ ಈ ದುರಂತದಲ್ಲಿ ಅಪಘಾತಕ್ಕೀಡಾಗಿದೆ.

ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದ್ದು ಇಂದು ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.

ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಘೋಷಿಸಿದ್ದಾರೆ. ‘ಈ ದುರಂತ ದುರದೃಷ್ಟಕ ಹಾಗೂ ತಕ್ಷಣವೇ ಪರಿಹಾರ ಕಾರ್ಯ ಆರಂಭವಾಗಿದೆ. ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಇಲಾಖೆ ಈಗಾಗಲೇ ಘೋಷಿಸಿದೆ’ ಎಂದು ಅವರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ