ಪಾಕಿಸ್ತಾನದ ಕ್ಷಿಪಣಿ ದಾಳಿ ಬೆನ್ನಲ್ಲೇ ದೇಶಾದ್ಯಂತ 24 ವಿಮಾನ ನಿಲ್ದಾಣ ತಾತ್ಕಾಲಿಕ ಬಂದ್! - Mahanayaka

ಪಾಕಿಸ್ತಾನದ ಕ್ಷಿಪಣಿ ದಾಳಿ ಬೆನ್ನಲ್ಲೇ ದೇಶಾದ್ಯಂತ 24 ವಿಮಾನ ನಿಲ್ದಾಣ ತಾತ್ಕಾಲಿಕ ಬಂದ್!

airport
09/05/2025

ನವದೆಹಲಿ: ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ತಿಳಿಸಿವೆ.

ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್ ಪೋರ್ಟ್ಗೆ ಬರಲು ಸೂಚಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ