ಕರಾವಳಿಯಲ್ಲಿ 24 ಗಂಟೆಗಳ ನಿರಂತರ ಮಳೆ: ಮತ್ತೆ 3 ಗಂಟೆಗಳ ಒಳಗೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಕಳೆದ 24 ಗಂಟೆಗಳಿಂದ ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ನಿರಂತರ ಮಳೆಯಿಂದ ತತ್ತರಿಸಿವೆ.
ಈ ನಡುವೆ ಮತ್ತೆ ಮೂರು ಗಂಟೆಯ ಒಳಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಕರಾವಳಿಯಲ್ಲಿ ದಾಖಲೆಯ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಇದರಿಂದಾಗಿ ತಗ್ಗು ಭಾಗದ ಪ್ರದೇಶಗಳಿಗೆ ನೀರು ನುಗ್ಗಿದೆ. ಉಡುಪಿಯಲ್ಲಿ 24 ಗಂಟೆಯಲ್ಲಿ 210.5 ಮೀ.ಮೀ ಮಳೆ ಬಿದ್ದ ಪರಿಣಾಮ 150ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.
ಕರ್ನಾಟಕದ ಕರಾವಳಿ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಇಂದು ಭಾರೀ ಮಳೆಯಾಗಲಿದ್ದು ಐಎಂಡಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ 4–5 ದಿನ ಈ ಭಾಗದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮಳೆಯ ಪ್ರಮಾಣ:
ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 264 ಮಿ.ಮೀ., ಉಡುಪಿಯಲ್ಲಿ 210.5 ಮಿ.ಮೀ., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 168 ಮಿ.ಮೀ., ಶಿವಮೊಗ್ಗದಲ್ಲಿ118.5 ಮಿ.ಮೀ., ವಿಜಯಪುರದಲ್ಲಿ 89 ಮಿ.ಮೀ., ಬೆಳಗಾವಿಯಲ್ಲಿ 87.5 ಮಿ.ಮೀ., ಚಿಕ್ಕಮಗಳೂರಿನಲ್ಲಿ 67.5 ಮಿ.ಮೀ. ಹಾಗೂ ಕೊಡಗಿನಲ್ಲಿ 58.5 ಮಿ.ಮೀ. ಮಳೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97