242 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದ ಪಾಪಿಗಳು: ಬೆಚ್ಚಿಬೀಳಿಸುವಂತಿದೆ ಪಾಪಿಗಳ ಕೃತ್ಯ

ಬೆಂಗಳೂರು: ಇತ್ತೀಚೆಗೆ ಬೈಯ್ಯಪ್ಪನಹಳ್ಳಿ ಪೊಲೀಸರು ಬೇಧಿಸಿರುವ ಅಲಮನೆಯೊಂದರಲ್ಲಿ ಭ್ರೂಣಹತ್ಯೆ ಪ್ರಕರಣದಲ್ಲಿ ಮೂರು ತಿಂಗಳಿನಲ್ಲಿ 242 ಭ್ರೂಣ ಹತ್ಯೆಗಳಾಗಿದ್ದು, ಅದೂ ಕೂಡ ಹೆಣ್ಣುಭ್ರೂಣ ಹತ್ಯೆ ಎಂಬುದು ಬೆಳಕಿಗೆ ಬಂದಿದೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ, ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ಬಿಚ್ಚಿಟ್ಟರು.
ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000 ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಪ್ರತಿ ಭ್ರೂಣ ಹತ್ಯೆಗೆ 25ರಿಂದ 30,000 ರೂ. ಚಾರ್ಜ್ ಮಾಡುತ್ತಿದ್ದರು. ಪತ್ತೆಗೆ 25ರಿಂದ 30,000 ರೂ. ಹಾಗೂ ಹತ್ಯೆಗೆ ಮತ್ತೆ 30,000 ರೂ. ಸೇರಿದಂತೆ ಒಟ್ಟು 60,000 ರೂ. ಪ್ಯಾಕೇಜ್ ರೀತಿಯಲ್ಲಿ ದಂಧೆ ನಡೆಸುತ್ತಿದ್ದರು. ತನಿಖೆ ಮುಂದುವರಿಸಿದ್ದೇವೆ. ಇನ್ನೂ ಇಬ್ಬರು ಮಧ್ಯವರ್ತಿಗಳು ಸಿಗಬೇಕಿದೆ. ಅವರು ಸಿಕ್ಕಮೇಲೆ ಇತರೆ ಮಾಹಿತಿಗಳು ಸಿಗಬೇಕಿದೆ ಎಂದರು.
ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂದಿಸಿದ್ದು, ಇಬ್ಬರು ಡಾಕ್ಟರ್ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದರು.