ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ 25 ಮಂದಿಗೆ ದೃಷ್ಠಿಯನ್ನೇ ಕಳೆದುಕೊಂಡರು!: ಏನಿದು ಘಟನೆ - Mahanayaka
12:16 AM Thursday 21 - August 2025

ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ 25 ಮಂದಿಗೆ ದೃಷ್ಠಿಯನ್ನೇ ಕಳೆದುಕೊಂಡರು!: ಏನಿದು ಘಟನೆ

kolkatha
05/07/2024


Provided by

ಕಲ್ಕತ್ತಾ: ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ 25ಕ್ಕೂ ಹೆಚ್ಚು ಮಂದಿ ದೃಷ್ಠಿ ಕಳೆದುಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ರಾಜದಾನಿ ಕಲ್ಕತ್ತಾದ ಮೆಟಿಯಾಬ್ರೂಜ್ ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಜೂನ್ 28 ಮತ್ತು ಜೂನ್ 29ರಂದು ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಒಟ್ಟು 25 ಮಂದಿಗೆ ದೃಷ್ಟಿ ದೋಷ ಉಂಟಾಗಿದೆ ಎನ್ನಲಾಗಿದೆ. ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ತುರ್ತ ಸಭೆ ಕರೆದಿದೆ.

ಸೋಂಕು ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸೋಂಕಿನ ಮೂಲವನ್ನು ಕಂಡು ಹಿಡಿಯಲು ಶಸ್ತ್ರಚಿಕಿತ್ಸೆಗೆ ಬಳಸಲಾದ ಉಪಕರಣಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸೋಂಕಿನ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ನಾವು ಸದ್ಯಕ್ಕೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ನಿಲ್ಲಿಸಿದ್ದೇವೆ ಎಂದು ಘಟನೆಯ ಬೆನ್ನಲ್ಲೇ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಫಂಗಸ್‌ನಿಂದ ಸೋಂಕು ಉಂಟಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ ರೋಗಿಯ ಕಣ್ಣಿನಲ್ಲಿ ಶಿಲೀಂಧ್ರ ಸೋಂಕು ಹೇಗೆ ಕಾಣಿಸಿಕೊಂಡಿತು ಎಂಬುದು ನಮಗೆ ತಿಳಿದಿಲ್ಲ. ಸೋಂಕಿನ ಮೂಲವು ಶಸ್ತ್ರಚಿಕಿತ್ಸೆಯ ಡ್ರಾಪ್ಸ್ ಅಥವಾ ವೈದ್ಯಕೀಯ ಸಾಧನವಾಗಿರಬಹುದು ಎಂದು ಊಹಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ