ಕಾಡಾನೆ ದಾಳಿಗೆ 25 ವರ್ಷದ ಮಹಿಳೆ ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ.
ಅನಿತಾ (25) ಮೃತಪಟ್ಟವರಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಘಟನೆ ನಡೆದಿದೆ. ಮೃತರು ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದವರಾಗಿದ್ದಾರೆ. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್ ಮನೆಯಲ್ಲಿ ಅನಿತಾ ವಾಸ ಮಾಡುತ್ತಿದ್ದರು.
ಕಳೆದ ರಾತ್ರಿ 9 ಗಂಟೆಗೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿತ್ತು. ಆದ್ರೆ ಶಿವಮೊಗ್ಗ ಹೋಗುವಾಗ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬನ್ನೂರು ಬಳಿ ಈ ದುರ್ಘಟನೆ ಸಂಭವಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD