ಕೊರೊನಾ ವೈರಸ್ ಲಸಿಕೆ ಪ್ರಯೋಗಕ್ಕೊಳಗಾಗಿದ್ದ 28 ವರ್ಷದ ಯುವಕ ಸಾವು - Mahanayaka

ಕೊರೊನಾ ವೈರಸ್ ಲಸಿಕೆ ಪ್ರಯೋಗಕ್ಕೊಳಗಾಗಿದ್ದ 28 ವರ್ಷದ ಯುವಕ ಸಾವು

22/10/2020

ನವದೆಹಲಿ: ಕೊರೊನಾ  ವೈರಸ್ ಲಸಿಕೆ ಪ್ರಯೋಗಕ್ಕೊಳಗಾಗಿದ್ದ 28 ವರ್ಷದ ಸ್ವಯಂ ಸೇವಕರೋರ್ವರು ಸಾವನ್ನಪ್ಪಿದ್ದು, ಇದೇ ಮೊದಲ ಬಾರಿಗೆ ಕೊರೊನಾ ಲಸಿಕೆ ಪ್ರಯೋಗದ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಔಷಧ ಸಂಸ್ಥೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ COVID-19 ಲಸಿಕೆಯ ವೈದ್ಯಕೀಯ ಪ್ರಯೋಗದಲ್ಲಿ ಭಾಗವಹಿಸಿದ್ದ 28 ವರ್ಷದ ವೈದ್ಯ ಬ್ರೆಜಿಲ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಂಸ್ಥೆ ತಿಳಿಸಿದೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಈ ವೈದ್ಯ ಮುಂಚೂಣಿಯಲ್ಲಿದ್ದರು ಎಂದು ಹೇಳಲಾಗಿದೆ. ಆದರೆ ಇವರ ಹೆಸರನ್ನು ಬಹಿರಂಗ ಪಡಿಸಲಾಗಿಲ್ಲ. ವೈದ್ಯಕೀಯ ಗೌಪ್ಯತೆಯ ಹಿನ್ನೆಲೆಯಲ್ಲಿ ಹೆಸರು ಬಹಿರಂಗ ಮಾಡಲಾಗಿಲ್ಲ ಎಂದು ತಿಳಿದು ಬಂದಿದೆ.\

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ