ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 25 ಮಂದಿ ಸಾವು, 60ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ಭೇಟಿ ಮಾಡಿದರು. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಇದನ್ನು ತಡೆಗಟ್ಟಲು ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಜನರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಾಗಿದೆ. ಇದನ್ನು ತಡೆಗಟ್ಟಲು ವಿಫಲವಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ” ಎಂದು ಸ್ಟಾಲಿನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth