ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ 29 ಪಿಡಿಒಗಳನ್ನು ವರ್ಗಾವಣೆ ಮಾಡಿದ್ದ ಈಶ್ವರಪ್ಪ! - Mahanayaka

ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ 29 ಪಿಡಿಒಗಳನ್ನು ವರ್ಗಾವಣೆ ಮಾಡಿದ್ದ ಈಶ್ವರಪ್ಪ!

eshwarappa santhosh patil
15/04/2022


Provided by

ಬೆಂಗಳೂರು:  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಇಲಾಖೆಯ 29 ಪಿಡಿಒಗಳನ್ನು ಏಕಾಏಕಿ ವರ್ಗಾವಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿತ್ತು.  ನನ್ನ ಸಾವಿಗೆ ಈಶ್ವರಪ್ಪನವರ ಕಿರುಕುಳವೇ ಕಾರಣ ಎಂದು ಸಂತೋಷ್ ಪಾಟೀಲ್ ವಾಟ್ಸಾಪ್ ಸಂದೇಶ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೇ ದಿನ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 29 ಪಿಡಿಒಗಳನ್ನು ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.  ಮೈಸೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಪಿಡಿಒಗಳ ವರ್ಗಾವಣೆ ಮಾಡಿದೆ. ಇದಕ್ಕೆ ಸಿಎಂ ಅನುಮೋದನೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ವರ್ಗಾವಣೆ ಮಾಡಿದೆ ಎನ್ನಲಾಗಿದೆ.

ಸಂತೋಷ್ ಆತ್ಮಹತ್ಯೆಯ ಬೆನ್ನಲ್ಲೇ ಈ ವರ್ಗಾವಣೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ನಡುವೆ ಈಶ್ವರಪ್ಪನವರು ಸಾಕ್ಷಿ ನಾಶ ಮಾಡುವ ಅಪಾಯವಿರುವುದರಿಂದ ಅವರನ್ನು ಬಂಧಿಸಬೇಕು ಎಂದು ವಿಪಕ್ಷಗಳು ತೀವ್ರವಾಗಿ ಒತ್ತಾಯಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನನ್ನ ಜೀವಿತಾವಧಿಯಲ್ಲಿ ದಲಿತ ಸಿಎಂ ಮಾಡುವ ಪಣತೊಟ್ಟಿದ್ದೇನೆ: ಕುಮಾರಸ್ವಾಮಿ

ನಿಮಗಿನ್ನೂ ಅವಕಾಶವಿದೆ: ಹಿಜಾಬ್ ಪರ ವಿದ್ಯಾರ್ಥಿನಿ ಸಿಎಂಗೆ ಹೇಳಿದ್ದೇನು?

ಈಶ್ವರಪ್ಪ ಶೀಘ್ರವೇ ಆರೋಪಗಳಿಂದ ಮುಕ್ತರಾಗುತ್ತಾರೆ: ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ

ಕೊನೆಗೂ ರಾಜೀನಾಮೆ ಘೋಷಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಇತ್ತೀಚಿನ ಸುದ್ದಿ