ದ್ವಿತೀಯ ಪಿಯುಸಿ: ಶೇ 81.15 ಮಂದಿ ಉತ್ತೀರ್ಣ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.
ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. ಇದೀಗ ಪಿಯು ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in/ ಮೂಲಕ ದ್ವಿತೀಯ ಪಿಯು ಫಲಿತಾಂಶಗಳು ಪ್ರಕಟಗೊಂಡಿವೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ:
ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್ ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth