ಪಾಕ್ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

ನವದೆಹಲಿ: ಪಂಜಾಬ್ ನ ಫಿರೋಜ್ ಪುರದಲ್ಲಿ ಇಂದು ರಾತ್ರಿ ಪಾಕಿಸ್ತಾನಿ ಡ್ರೋನ್ ದಾಳಿಯ ಪರಿಣಾಮ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರಿಗೂ ಸುಟ್ಟ ಗಾಯಗಳಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
“ಮೂವರು ಜನರು ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಅವರಿಗೆ ಸುಟ್ಟ ಗಾಯಗಳಾಗಿವೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಾರೆ. ಹೆಚ್ಚಿನ ಡ್ರೋನ್ ಗಳನ್ನು ಸೇನೆಯು ತಟಸ್ಥಗೊಳಿಸಿದೆ ಎಂದು ಫಿರೋಜ್‌ಪುರ ಪೊಲೀಸ್ ಅಧಿಕಾರಿ ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ.
ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ದಾಖಲಿಸಲಾಗಿದೆ. ಕುಟುಂಬದ ಮೂವರು ಸದಸ್ಯರಲ್ಲಿ ಇಬ್ಬರಿಗೆ ಸಾಧಾರಣ ಮಟ್ಟದ ಗಾಯಗಳಾಗಿವೆ. ಆದರೆ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದರು.
“ಡ್ರೋನ್ ಬಾಂಬ್ ನಿಂದಾಗಿ, ಮೂವರು ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ, ಅವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಉಳಿದ ಇಬ್ಬರಿಗೆ ಕಡಿಮೆ ಸುಟ್ಟ ಗಾಯಗಳಿವೆ. ನಾವು ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಿದ್ದೇವೆ. ಅವರು ಒಂದೇ ಕುಟುಂಬದವರು” ಎಂದು ಡಾ.ಕಮಲ್ ಬಾಗಿ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: