ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ಭಯೋತ್ಪಾದಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರ: ಗುರುವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್—ಎ–ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಗುರುವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಮೂರಕ್ಕಿಂತ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎನ್ನುವ ಶಂಕೆಗಳು ಕೂಡ ವ್ಯಕ್ತವಾಗಿವೆ.
ಸಾವಿಗೀಡಾದ ಮೂವರು ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ.
48 ಗಂಟೆಗಳ ಒಳಗೆ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಎರಡನೇ ಎನ್ ಕೌಂಟರ್ ಇದಾಗಿದೆ. ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮೂವರು ಲಷ್ಕರ್–ಎ–ತೈಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD