ಅಸುರಕ್ಷಿತ ಎಂದರೂ ಹೋಗಲೇ ಇಲ್ಲ: ಕುಸಿದು ಬಿದ್ದ ವಸತಿ ಕಟ್ಟಡ; ಮೂರು ಜೀವ ಬಲಿ

23/06/2023

ಗುಜರಾತ್ ನ ಜಾಮ್ನಗರ್ ನಗರದಲ್ಲಿ ಶುಕ್ರವಾರ ಸಂಜೆ ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ.  8 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ‌.

ಈ ಕುರಿತು ಮಾಹಿತಿ ನೀಡಿದ ಮುನ್ಸಿಪಲ್ ಕಮಿಷನರ್ ಡಿಎನ್ ಮೋದಿ, ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. ಕಟ್ಟಡವು ಶಿಥಿಲಾವಸ್ಥೆಯಲ್ಲಿರುವ ಕಾರಣ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಈ ಅಪಾರ್ಟ್ ಮೆಂಟ್ ಅಸುರಕ್ಷಿತ ಎಂದು ಘೋಷಿಸಲ್ಪಟ್ಟಿದ್ದರಿಂದ ಈ ಅಪಾರ್ಟ್ ಮೆಂಟ್ ನಲ್ಲಿ ವಾಸಿಸದಂತೆ ಗುಜರಾತ್ ಹೌಸಿಂಗ್ ಬೋರ್ಡ್ ಪದೇ ಪದೇ ಜನರಿಗೆ ಎಚ್ಚರಿಕೆ ನೀಡಿತ್ತು ಎಂದು ಮುನ್ಸಿಪಲ್ ಕಮಿಷನರ್ ಡಿಎನ್ ಮೋದಿ ಹೇಳಿದ್ದಾರೆ.

ಈ ಕಟ್ಟಡವು ಶಿಥಿಲಾವಸ್ಥೆಯಲ್ಲಿತ್ತು. ಇಲ್ಲಿನ ನಿವಾಸಿಗಳು ಇನ್ನೂ ಒಳಗೆ ಇದ್ದಾಗ ಸಂಜೆ 6 ರ ಸುಮಾರಿಗೆ ಅದು ಕುಸಿದಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಅವಶೇಷಗಳಿಂದ ಮೂರರಿಂದ ನಾಲ್ಕು ಜನರನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಂಟರಿಂದ ಹತ್ತು ಜನರು ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸಾಧನಾ ಕಾಲೋನಿಯಲ್ಲಿರುವ ಅಪಾರ್ಟ್ ಮೆಂಟ್ ಕಟ್ಟಡ ಇಂದು ಕುಸಿದಿದೆ. ಸುಮಾರು 8 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಈವರೆಗೆ 5 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಜಾಮ್ನಗರ್ ಸಂಸದೆ ಪೂನಮ್ಬೆನ್ ಮಾದಮ್ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version