ಗುಜರಾತ್ ನ ಪೋರ್ ಬಂದರ್ ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ: ಮೂವರು ಸಾವು
ಗುಜರಾತ್ ನ ಪೋರ್ಬಂದರ್ ವಿಮಾನ ನಿಲ್ದಾಣದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಪರಿಣಾಮ ಇಬ್ಬರು ಪೈಲಟ್ ಗಳು ಸೇರಿದಂತೆ ಮೂವರು ಸಿಬ್ಬಂದಿ ಭಾನುವಾರ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 12.10 ಕ್ಕೆ ಈ ಘಟನೆ ನಡೆದಿದೆ ಎಂದು ಪೋರ್ ಬಂದರ್ ಪೊಲೀಸ್ ವರಿಷ್ಠಾಧಿಕಾರಿ ಭಗೀರಥಸಿನ್ಹ ಜಡೇಜಾ ತಿಳಿಸಿದ್ದಾರೆ.
ಪೋರ್ ಬಂದರ್ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 12:10 ಕ್ಕೆ ಇಳಿಯುವಾಗ ಕೋಸ್ಟ್ ಗಾರ್ಡ್ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಡಿಕೆಯ ತರಬೇತಿಯ ಸಮಯದಲ್ಲಿ ಅಪಘಾತ ಸಂಭವಿಸಿದೆ.
ಮೂವರು ಸಿಬ್ಬಂದಿಯನ್ನು ಹೊತ್ತ ಹೆಲಿಕಾಪ್ಟರ್ ಪೋರ್ ಬಂದರ್ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ. ಮೂವರನ್ನು ಅವಶೇಷಗಳಿಂದ ರಕ್ಷಿಸಿ ತೀವ್ರ ಸುಟ್ಟಗಾಯಗಳೊಂದಿಗೆ ಪೋರ್ ಬಂದರ್ ನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj