ಒತ್ತುವರಿ ತೆರವು ಖಂಡಿಸಿ ಇಂದು ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳು ಬಂದ್! - Mahanayaka
2:39 PM Saturday 31 - January 2026

ಒತ್ತುವರಿ ತೆರವು ಖಂಡಿಸಿ ಇಂದು ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳು ಬಂದ್!

banglore bandh
17/08/2024

ಚಿಕ್ಕಮಗಳೂರು: ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ  ಇಂದು(ಆ.17) ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳು ಬಂದ್ ಆಚರಿಸಲಾಗುತ್ತಿದೆ.

ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ವೇದಿಕೆಯಿಂದ ಬಂದ್ ಗೆ ಕರೆ ನೀಡಲಾಗಿತ್ತು. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಗೆ ಕರೆ ನೀಡಲಾಗಿದೆ.

ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ, 3 ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆ ಸರ್ಕಾರದ ವಿರುದ್ದ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಿದೆ.

ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣವನ್ನ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ. ಕೊಪ್ಪದಲ್ಲಿ ಬಂದ್ ಹಿನ್ನೆಲೆ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಸರ್ಕಾರದ ವಿರುದ್ಧ  ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ