ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆ: ಮೂವರು ಉಗ್ರರ ಹತ್ಯೆ

29/08/2024
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಮತ್ತು ತಂಗ್ಧಾರ್ ಪ್ರದೇಶಗಳಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಗುರುವಾರ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯು ತಿಳಿಸಿದೆ.
ಸಂಭಾವ್ಯ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಆಗಸ್ಟ್ 28-29 ರ ಮಧ್ಯರಾತ್ರಿ ಕುಪ್ವಾರಾದ ತಂಗ್ಧಾರ್ ನಲ್ಲಿ ಜಂಟಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಸೇನೆ ಅಧಿಕೃತ ಹ್ಯಾಂಡಲ್ ಎಕ್ಸ್‌ನಲ್ಲಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth