ಅನಿಲ ಸೋರಿಕೆ: ಪ್ರಜ್ಞೆ ಕಳೆದುಕೊಂಡು ಬಿದ್ದ ಕಾರ್ಮಿಕರು: 30 ಮಂದಿ ಆಸ್ಪತ್ರೆಗೆ ದಾಖಲು - Mahanayaka
10:39 PM Thursday 15 - January 2026

ಅನಿಲ ಸೋರಿಕೆ: ಪ್ರಜ್ಞೆ ಕಳೆದುಕೊಂಡು ಬಿದ್ದ ಕಾರ್ಮಿಕರು: 30 ಮಂದಿ ಆಸ್ಪತ್ರೆಗೆ ದಾಖಲು

gas leak
03/06/2022

ಆಂಧ್ರಪ್ರದೇಶ:  ಆಂಧ್ರಪ್ರದೇಶದಲ್ಲಿ ಅನಿಲ ಸೋರಿಕೆಯಿಂದ 30 ಮಹಿಳಾ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ.  ವಿಶಾಖಪಟ್ಟಣಂನ ಪೋರಸ್ ಲ್ಯಾಬೋರೇಟರೀಸ್ ಎಂಬ ಔಷಧಿ ಕಂಪನಿಯಿಂದ ಗ್ಯಾಸ್ ಸೋರಿಕೆಯಾಗಿದ್ದು, ಪರಿಣಾಮವಾಗಿ  ಸಮೀಪದ ಜವಳಿ ಗಿರಣಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಶಾರೀರಿಕ ಅಸ್ವಸ್ಥತೆ ಉಂಟಾಗಿದೆ.

ಮೂವತ್ತು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.  ಘಟನಾ ಸ್ಥಳದಲ್ಲಿ ನಾಲ್ವರು ಕುಸಿದು ಬಿದ್ದರು.ಯಾರ ಸ್ಥಿತಿಯೂ ಚಿಂತಾಜನಕವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೋರಸ್ ಪ್ರಯೋಗಾಲಯದ ಪಕ್ಕದಲ್ಲಿ ಗಾರ್ಮೆಂಟ್ ಫ್ಯಾಕ್ಟರಿ ಇದೆ.  ಸೈಟ್ನಲ್ಲಿ ಸುಮಾರು 1,800 ಜನರು ಕೆಲಸ ಮಾಡುತ್ತಿದ್ದಾರೆ. ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಕಾರ್ಮಿಕರಲ್ಲಿ ವಾಂತಿಭೇದಿ ಉಂಟಾಗಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.  ಘಟನೆಯನ್ನು ಸರ್ಕಾರ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದು ಸಿಎಂ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ: ಸಿಸಿ ಟಿವಿ ದೃಶ್ಯಗಳಿಂದ ಸಿಕ್ಕಿ ಬಿದ್ದ ಕಾಮುಕ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್:  ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಸಾವು

ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 7 ಮಂದಿ ಸಜೀವ ದಹನ

ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಹಿಂದುತ್ವ ಹೋರಾಟಗಾರರಿಗೆ ಮೋಹನ್ ಭಾಗವತ್ ತಿರುಗೇಟು

ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಡಾ.ಕೆ.ಟಿ.ಜಲೀಲ್

ಇತ್ತೀಚಿನ ಸುದ್ದಿ