ಯೆಮೆನ್ ನಲ್ಲಿ ಹೌತಿ ಬಂಡುಕೋರರ ವಿರುದ್ಧ ಟ್ರಂಪ್ ಸೇನಾ ದಾಳಿ: 31 ಮಂದಿ ಸಾವು

ಯೆಮೆನ್ ನ ಇರಾನ್ ಬೆಂಬಲಿತ ಹೌತಿಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪಕ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ್ದಾರೆ. ಕಡಲ್ಗಳ್ಳತನ, ಹಿಂಸಾಚಾರ ಮತ್ತು ಅಮೆರಿಕನ್ನರನ್ನು ಗುರಿಯಾಗಿಸಿಕೊಂಡು ಭಯೋತ್ಪಾದನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಡೆದ ದಾಳಿಯಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಇಂಡಿಯನ್ ಟುಡೇ ವರದಿ ಮಾಡಿದೆ.
ಹೌತಿ ಬಂಡುಕೋರರನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಅಮೆರಿಕ ಮರು ವರ್ಗೀಕರಿಸಿದ ಸುಮಾರು ಎರಡು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.
“ಇಂದು ಯೆಮೆನ್ ನಲ್ಲಿ ಹೌತಿ ಭಯೋತ್ಪಾದಕರ ವಿರುದ್ಧ ನಿರ್ಣಾಯಕ ಮತ್ತು ಶಕ್ತಿಯುತ ಮಿಲಿಟರಿ ಕ್ರಮವನ್ನು ಪ್ರಾರಂಭಿಸಲು ನಾನು ಯುನೈಟೆಡ್ ಸ್ಟೇಟ್ಸ್ ಮಿಲಿಟರಿಗೆ ಆದೇಶಿಸಿದ್ದೇನೆ. ಅವರು ಅಮೆರಿಕನ್ ಮತ್ತು ಇತರ ಹಡಗುಗಳು, ವಿಮಾನಗಳು ಮತ್ತು ಡ್ರೋನ್ ಗಳ ವಿರುದ್ಧ ಕಡಲ್ಗಳ್ಳತನ, ಹಿಂಸಾಚಾರ ಮತ್ತು ಭಯೋತ್ಪಾದನೆಯ ನಿರಂತರ ಅಭಿಯಾನವನ್ನು ನಡೆಸಿದ್ದಾರೆ” ಎಂದು ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ನಲ್ಲಿ ಬರೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj