7:57 AM Wednesday 10 - December 2025

ಮುಚ್ಚಲ್ಪಟ್ಟಿದ್ದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಕ್ಕೆ ಸೂಚನೆ

airports
12/05/2025

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಮುಚ್ಚಲ್ಪಟ್ಟಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡಲು ಸೂಚನೆ ನೀಡಲಾಗಿದೆ.

32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ.

ಪಂಜಾಬ್‌ನ ಅಮೃತಸರ, ಲುಧಿಯಾನ, ಪಟಿಯಾಲ, ಬಟಿಂಡಾ, ಹಲ್ವಾರಾ ಮತ್ತು ಪಠಾಣ್‌ ಕೋಟ್, ಹಿಮಾಚಲ ಪ್ರದೇಶದ ಭುಂತರ್, ಶಿಮ್ಲಾ ಮತ್ತು ಕಾಂಗ್ರಾ ಗಗ್ಗಲ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು, ಲಡಾಖ್‌ನ ಲೇಹ್, ರಾಜಸ್ಥಾನದ ಕಿಶೆಂಗಢ, ಜೈಸರ್, ಜೋದ್‌ಪುರ ಮತ್ತು ಬಿಕಾನೇರ್ ಮತ್ತು ಗುಜರಾತ್‌ ನ ಮುಂದ್ರ, ಜಾಮ್‌ನಗರ ಸೇರಿದಂತೆ ಹಲವು ವಿಮಾನ ನಿಲ್ದಾಣಗಳನ್ನು ಬಂದ್‌ ಮಾಡಲಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version