ಪಾಕಿಸ್ತಾನದಲ್ಲಿ ಭೀಕರ ರೈಲು ದುರಂತ: 33 ಮಂದಿ ಸಾವು, ನೂರಕ್ಕಿಂತಲೂ ಹೆಚ್ಚಿನ ಜನರಿಗೆ ಗಾಯ - Mahanayaka

ಪಾಕಿಸ್ತಾನದಲ್ಲಿ ಭೀಕರ ರೈಲು ದುರಂತ: 33 ಮಂದಿ ಸಾವು, ನೂರಕ್ಕಿಂತಲೂ ಹೆಚ್ಚಿನ ಜನರಿಗೆ ಗಾಯ

07/08/2023

ರಾವಲ್ಪಿಂಡಿಗೆ ತೆರಳುತ್ತಿದ್ದ ರೈಲಿನ ಐದು ಬೋಗಿಗಳು ಹಳಿತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದಾರೆ. ನೂರಕ್ಕಿಂತಲೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ‌.

ಹಜಾರಾ ಎಕ್ಸ್‌ಪ್ರೆಸ್ ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿರುವಾಗ ನವಾಬ್‌ಶಾ ಪ್ರದೇಶದ ಸರ್ಹಾರಿ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.

ಹಾನಿಗೊಳಗಾದ ಬೋಗಿಗಳಿಂದ ಕನಿಷ್ಠ ಅನೇಕ ಶವಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪಾಕಿಸ್ತಾನ ರೈಲ್ವೆಯ ಉಪ ಅಧೀಕ್ಷಕ ಮಹಮೂದ್ ರೆಹಮಾನ್ ತಿಳಿಸಿದ್ದಾರೆ.

ಸರ್ಹಾರಿ ರೈಲು ನಿಲ್ದಾಣದ ಬಳಿ ಅಪಘಾತದ ಸ್ಥಳದಲ್ಲಿ ರೈಲಿನ ಭೋಗಿಗಳು ತೀವ್ರ ಹಾನಿಗೊಳಗಾಗಿರುವುದು ಕಂಡುಬಂದಿದೆ.

ಸದ್ಯ ರಕ್ಷಣಾ ಕಾರ್ಯಾಚರಣೆಯ ಮೇಲೆ ಗಮನ ಹರಿಸಲಾಗಿದ್ದು, ಅಪಘಾತದ ಹಿಂದಿನ ಕಾರಣವನ್ನು ತನಿಖೆ ಮಾಡಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ