35 ವರ್ಷದ ಕಾಡಾನೆಯ ದಾರುಣ ಸಾವು: ಆನೆಯ ಸಾವಿನ ಬಗ್ಗೆ ಹಲವು ಅನುಮಾನಗಳು - Mahanayaka
11:09 AM Saturday 10 - January 2026

35 ವರ್ಷದ ಕಾಡಾನೆಯ ದಾರುಣ ಸಾವು: ಆನೆಯ ಸಾವಿನ ಬಗ್ಗೆ ಹಲವು ಅನುಮಾನಗಳು

wild elephant
12/05/2024

ಚಿಕ್ಕಮಗಳೂರು:  ಕಾಡಾನೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಕೆರೆಹಕ್ಲು ಗ್ರಾಮದಲ್ಲಿ ನಡೆದಿದೆ.

ವಾರದ ಹಿಂದೆ ಇದೇ ಭಾಗದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿದ್ದರು. ಇದೀಗ ಸುಮಾರು 35 ವರ್ಷ ವಯಸ್ಸಿನ ಕಾಡಾನೆಯೊಂದು ಈ ಭಾಗದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಇತ್ತೀಚೆಗೆ ಈ ಭಾಗದಲ್ಲಿ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಾಚರಣೆ ಕೂಡ ನಡೆಸಿತ್ತು.

ಸದ್ಯ ಕಾಫಿ ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ