ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವು
06/01/2025
ಚಾಮರಾಜನಗರ: 3ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.
ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ(8) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.
ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕಿ ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗಿದ್ದ ವೇಳೆ ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: