ಝೀಲಂ ನದಿಯಲ್ಲಿ ದೋಣಿ ಪಲ್ಟಿ: ನಾಲ್ವರು ಸಾವು

ಶ್ರೀನಗರದ ಝೀಲಂ ನದಿಯಲ್ಲಿ ಮಂಗಳವಾರ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಪಲ್ಟಿಯಾದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ನಗರದ ಬಟ್ವಾರಾ ಗಂಡಬಾಲ್ ಪ್ರದೇಶದ ಸ್ಥಳೀಯರು ಇಂಡಿಯಾ ಟುಡೇ ಟಿವಿಗೆ ಮುಂಜಾನೆ ದೋಣಿ ಮಗುಚಿ ಬಿದ್ದಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮುಜಾಫರ್ ಝರ್ಗರ್ ಮಾತನಾಡಿ, ಏಳು ಜನರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಾಗಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡವನ್ನು ನಿಯೋಜಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಝೀಲಂ ಸೇರಿದಂತೆ ಕಾಶ್ಮೀರದ ಹಲವಾರು ಜಲಮೂಲಗಳ ನೀರಿನ ಮಟ್ಟ ಹೆಚ್ಚಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth