ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ನಾಲ್ವರು ಸಾವು - Mahanayaka
10:54 PM Tuesday 16 - December 2025

ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ನಾಲ್ವರು ಸಾವು

26/02/2024

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ವೇಗವಾಗಿ ಚಲಿಸುತ್ತಿದ್ದ ಬಸ್, ರಸ್ತೆ ಬದಿಯ ದುರಸ್ತಿ ಅಂಗಡಿಯಲ್ಲಿ ನಿಲ್ಲಿಸಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.

ಪ್ರತಿಪಾಡು ಮಂಡಲದ ಪಡಲೆಮ್ಮ ದೇವಸ್ಥಾನದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ಅನ್ನಾವರಂನಿಂದ ರಾಜಮಹೇಂದ್ರವರಂ (ರಾಜಮಂಡ್ರಿ) ಗೆ ತೆರಳುತ್ತಿದ್ದಾಗ ಟೈರ್ ಪಂಕ್ಚರ್ ಆದ ಹಿನ್ನೆಲೆಯಲ್ಲಿ ವಾಹನವನ್ನು ದುರಸ್ತಿಗಾಗಿ ನಿಲ್ಲಿಸಲಾಗಿತ್ತು.

ಆ ಸಮಯದಲ್ಲಿ, ವೇಗವಾಗಿ ಚಲಿಸುತ್ತಿದ್ದ ಆರ್ ಟಿಸಿ ಬಸ್ ಟ್ರಕ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. ಬಸ್ ಮಾರ್ಗದಲ್ಲಿ ವಿರೋಧ ದಿಕ್ಕಿನಿಂದ ಬರುತ್ತಿದ್ದ ಇನ್ನೊಬ್ಬ ವ್ಯಕ್ತಿ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರತಿಪಾಡು ಸಬ್ ಇನ್ಸ್ ಪೆಕ್ಟರ್ ಪವನ್ ಕುಮಾರ್ ಘಟನಾ ಸ್ಥಳಕ್ಕೆ ಆಗಮಿಸಿ ಅಪಘಾತಕ್ಕೆ ಸಂಬಂಧಿಸಿದ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಈ ವಿಷಯದಲ್ಲಿ ಪ್ರಕರಣ ದಾಖಲಾಗಿದ್ದು, ದುರಂತ ಘಟನೆಗೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಇಂಡಿಯಾ ಟುಡೇಗೆ ತಿಳಿಸಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ