ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಫಾಲ್ಸ್ ಗೆ ಬಿದ್ದ ನಾಲ್ವರು ಯುವತಿಯರ ದಾರುಣ ಸಾವು - Mahanayaka
5:20 PM Saturday 14 - December 2024

ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಫಾಲ್ಸ್ ಗೆ ಬಿದ್ದ ನಾಲ್ವರು ಯುವತಿಯರ ದಾರುಣ ಸಾವು

kitwad falls
26/11/2022

ಬೆಳಗಾವಿ: ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವತಿಯರು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಫಾಲ್ಸ್ ಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ  ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ಕಿತವಾಡ ಫಾಲ್ಸ್ ನಲ್ಲಿ ನಡೆದಿದೆ.

ಉಜ್ವಲ್ ನಗರ ನಿವಾಸಿ  ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸಂ ಪಟೇಲ್(20), ಝಟ್ ‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20 ) ಹಾಗೂ  ತಸ್ಮಿಯಾ(20) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬಾಶಿಬಾನ್ ಮದರಸ ಶಾಲೆಯಲ್ಲಿ ಓದುತ್ತಿದ್ದ 40 ಯುವತಿಯರ ತಂಡ ಬೆಳಗಾವಿ ನಗರದಿಂದ 26 ಕಿ.ಮೀ. ದೂರದಲ್ಲಿರುವ ಮಹಾರಾಷ್ಟ್ರ-ಕರ್ನಾಟಕದ ಗಡಿಯಲ್ಲಿರುವ ಕಿತ್ವಾಡ್ ಅಣೆಕಟ್ಟು ಮತ್ತು ಜಲಪಾತ ವೀಕ್ಷಣೆಗೆ ತೆರಳಿದ್ದು, ಜಲಪಾತದ ಬಳಿ ಐವರು ಯುವತಿಯರು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಫಾಲ್ಸ್ ಬಿದ್ದಿದ್ದಾರೆ. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದು ಓರ್ವಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಘಟನೆ ಸಂಬಂಧ ಮಹಾರಾಷ್ಟ್ರದ ಚಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ