ಬೀಚ್ ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ನಾಲ್ವರು ಅಪ್ರಾಪ್ತರ ಸಹಿತ 10 ಮಂದಿ ಅರೆಸ್ಟ್

odisha
18/06/2025

ಒಡಿಶಾ:  ಬೀಚ್ ನಲ್ಲಿ  ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ  ಒಡಿಶಾದ ಬೆರ್ಹಾಂಪುರ ನಗರದಲ್ಲಿ ನಡೆದಿದೆ.

ಬೆರ್ಹಾಂಪುರ ನಗರದ ಸಮೀಪದ ಗೋಪಾಲಪುರ ಬೀಚ್‌ ಗೆ ತನ್ನ ಸ್ನೇಹಿತನೊಂದಿಗೆ ವಿದ್ಯಾರ್ಥಿನಿ ಬಂದಿದ್ದಳು. ಆರೋಪಿಗಳು ಭಾನುವಾರ 3 ಬೈಕ್ ಗಳಲ್ಲಿ  ಗೋಪಾಲಪುರ ಬೀಚ್‌ ಗೆ ಬಂದಿದ್ದು, ನಿರ್ಜನ ಪ್ರದೇಶದಲ್ಲಿ ಜೊತೆಗಿದ್ದ ಜೋಡಿಯನ್ನು ಹಿಡಿದು, ಯುವಕನ ಮೇಲೆ ಹಲ್ಲೆ ನಡೆಸಿ ಕಟ್ಟಿ ಹಾಕಿ, ವಿದ್ಯಾರ್ಥಿನಿಯ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ. ಬಳಿಕ ಯುವಕನ ಬಳಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ನಗದು ಮತ್ತು ಯುಪಿಐ ಮೂಲಕ ಯುವಕನಿಂದ ಹಣ ಪಡೆದುಕೊಂಡು ನಂತರ ಕಳುಹಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಗೋಪಾಲ್‌ ಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 70(1) (ಗುಂಪು ಅತ್ಯಾಚಾರ), 296 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 351(3) (ಕ್ರಿಮಿನಲ್ ಬೆದರಿಕೆ) ಮತ್ತು 310(2) (ದರೋಡೆ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇನ್ನೂ ಬಾಲಪರಾಧಿಗಳನ್ನು ವಯಸ್ಕರಂತೆ ಪರಿಗಣಿಸಲು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ಬೆರ್ಹಾಂಪುರ ಪೊಲೀಸ್ ವರಿಷ್ಠಾಧಿಕಾರಿ ಸರವಣ ವಿವೇಕ್ ಎಂ. ತಿಳಿಸಿದ್ದಾರೆ.

ಗೋಪಾಲ್‌ ಪುರ ಪೊಲೀಸರು ಈಗಾಗಲೇ ನೊಂದ ವಿದ್ಯಾರ್ಥಿನಿಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದ್ದು, ಆಕೆಯ ಮತ್ತು ಆಕೆಯ ಸ್ನೇಹಿತನ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version