12:01 AM Saturday 23 - August 2025

ಜಾರ್ಖಂಡ್ ನಲ್ಲಿ ಎನ್ ಕೌಂಟರ್: ನಾಲ್ವರು ಮಾವೋವಾದಿಗಳ ಸಾವು

17/06/2024

ಜಾರ್ಖಂಡ್ ನ ಪಶ್ಚಿಮ ಸಿಂಗ್ಭುಮ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಎನ್ ಕೌಂಟರ್ ‌ನಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದರೆ, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ವಕ್ತಾರ ಮತ್ತು ಐಜಿ (ಕಾರ್ಯಾಚರಣೆ) ಅಮೋಲ್ ವಿ ಹೊಮ್ಕರ್ ಪಿಟಿಐಗೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಒಬ್ಬ ವಲಯ ಕಮಾಂಡರ್, ಒಬ್ಬ ಉಪ-ವಲಯ ಕಮಾಂಡರ್ ಮತ್ತು ಒಬ್ಬ ಪ್ರದೇಶ ಕಮಾಂಡರ್ ಸೇರಿದಂತೆ ನಾಲ್ವರು ನಕ್ಸಲರು ಎನ್‌ ಕೌಂಟರ್ ನಲ್ಲಿ ಸಾವನ್ನಪ್ಪಿದ್ರೆ ಚೈಬಾಸಾದಲ್ಲಿ ಇಂದು ಪ್ರದೇಶ ಕಮಾಂಡರ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೇ ವಿವಿಧ ಸಾಮರ್ಥ್ಯದ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version