6:10 AM Wednesday 22 - October 2025

ಗೆಳತಿಯ ಮೇಲಿನ ಸಿಟ್ಟಿನಿಂದ 40 ಲಕ್ಷ ರೂ. ಬೆಲೆಯ ಕಾರಿಗೆ ಬೆಂಕಿ ಹಚ್ಚಿದ ವೈದ್ಯ!

fire
28/01/2023

ಚೆನ್ನೈ: ಗೆಳತಿಯ ಮೇಲಿನ ಸಿಟ್ಟಿನಿಂದ ವೈದ್ಯನೋರ್ವ ತನ್ನ 40 ಲಕ್ಷ ರೂ. ಬೆಲೆಯ ಮರ್ಸಿಡಿಸ್ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ.

ಧರ್ಮಪುರಿಯ ಕವಿನ್(28) ಕಾರಿಗೆ ಬೆಂಕಿ ಹಚ್ಚಿದ ವೈದ್ಯನಾಗಿದ್ದು, ಡಾಕ್ಟರೇಟ್ ಮುಗಿಸಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಆರಂಭಿಸಿದ ಈತ ಅದೇ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಎರಡು ವರ್ಷಕ್ಕೂ ಹೆಚ್ಚು ಕಾಲ ಸಂಬಂಧ ಹೊಂದಿದ್ದ. ಕವಿನ್ ಹಾಗೂ ಆತನ ಗೆಳತಿ ಲಾಂಗ್ ಡ್ರೈವ್ ಹೋದಾಗ ಯಾವುದೋ ವಿಷಯಕ್ಕೆ ಜಗಳವಾಡಿದ್ದು, ಜಗಳ ತಾರಕಕ್ಕೇರಿದಾಗ ಆಕ್ರೋಶ ಗೊಂಡ ಕವಿನ್ ತನ್ನ ದುಬಾರಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಇವರ ಕಾದಾಟ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದು, ವಿಚಾರಣೆಯ ಬಳಿಕ ಜಾಮೀನಿನ ಮೂಲಕ ಬಿಡುಗಡೆ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version