5:12 PM Thursday 15 - January 2026

“45 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆದುಕೊಳ್ಳಿ”

covid lasike
01/04/2021

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ  ಪ್ರತಿಯೊಬ್ಬ ನಾಗರಿಕರು ಕೂಡ ಕೊರೊನಾ ಲಸಿಕೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. ಎಲ್ಲ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ ಎಂದು ಹೇಳಿದ್ದಾರೆ.

45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಇಂದಿನಿಂದ ಲಸಿಕೆ ಪಡೆಯಬಹುದು, ನಿಮ್ಮ ಹತ್ತಿರದ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳಿ. ಜೊತೆಯಾಗಿ ನಾವೆಲ್ಲರೂ ಕೊರೋನಾ ಹಿಮ್ಮೆಟ್ಟಿಸೋಣ ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version