ಬೆಂಕಿ ತಗುಲಿ ಧಗಧಗನೆ ಉರಿದ 5 ಕಾಲೇಜು ಬಸ್ ಗಳು!

29/06/2024
ಬೆಂಗಳೂರು: ಬೆಂಕಿ ತಗುಲಿ ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಹಳೆ ಬಸ್ ಗಳು ಕೆಟ್ಟು ಹೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು(ಶನಿವಾರ) ಮಧ್ಯಾಹ್ನ 2:40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ.
ದುರ್ಘಟನೆ ನಡೆದ ತಕ್ಷಣವೇ ಕಾಲೇಜು ಆಡಳಿತ ಮಂಡಳಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲ ನಗರ ಪೊಲೀಸರಿಗೆ ಮಾಹಿತಿ ನೀಡಿದರು.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97