ವಿದ್ಯುತ್ ತಂತಿ ಸ್ಪರ್ಶಿಸಿ 5 ಹಸುಗಳು ಸಾವು!
25/09/2024
ಚಿಕ್ಕಮಗಳೂರು: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡ ಗ್ರಾಮದಲ್ಲಿ ನಡೆದಿದೆ.
ಗಾಳಿ–ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಹಸುಗಳು ತುಳಿದಿದ್ದು, ಪರಿಣಾಮವಾಗಿ ವಿದ್ಯುತ್ ಶಾಕ್ ತಗುಲಿ ಹಸುಗಳು ದಾರುಣವಾಗಿ ಸಾವನ್ನಪ್ಪಿವೆ.
ಮೂವರು ರೈತರಿಗೆ ಸೇರಿದ 5 ಹಸುಗಳು ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ಹಸುಗಳ ಸಾವಿಗೆ ಸೂಕ್ತ ಪರಿಹಾರ ನೀಡುವಂತೆ ಹಸು ಕಳೆದುಕೊಂಡ ರೈತರು ಸರ್ಕಾರ ಹಾಗೂ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: