ಟ್ರಕ್-ಕಾರು ನಡುವೆ ಭೀಕರ ಡಿಕ್ಕಿ: 5 ವಿದ್ಯಾರ್ಥಿಗಳ ಸಾವು
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಅಪಘಾತದಲ್ಲಿ ಗಾಯಗೊಂಡು ಬದುಕುಳಿದಿದ್ದಾರೆ. ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರ ಪ್ರಕಾರ, ಚೆನ್ನೈ-ತಿರುತ್ತಣಿ ಹೆದ್ದಾರಿಯಲ್ಲಿ ಒಟ್ಟು ಏಳು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾಗ ಟ್ರಕ್ ಅವರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ರಸ್ತೆ ಅಪಘಾತದ ಸುದ್ದಿ ತಿಳಿದ ನಂತರ, ರಕ್ಷಣಾ ತಂಡಗಳು ಮತ್ತು ಕಣಗಮ್ಮಚತಿರಂ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದರು. ಅಪಘಾತದಲ್ಲಿ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದರಿಂದ ದೇಹಗಳನ್ನು ಹೊರತೆಗೆಯುವುದು ಸವಾಲಾಯಿತು. ಗಾಯಗೊಂಡ ಇಬ್ಬರನ್ನು ತಕ್ಷಣ ಚಿಕಿತ್ಸೆಗಾಗಿ ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಎರಡು ಗಂಟೆಗಳ ಕಾಲ ಸಂಚಾರ ವಿಳಂಬವಾಯಿತು.
ಕನಗಮ್ಮಚತಿರಂ ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿರುವ ಐವರು ವಿದ್ಯಾರ್ಥಿಗಳನ್ನು ಒಂಗೋಲ್ ಮೂಲದವರೆಂದು ಗುರುತಿಸಲಾಗಿದ್ದು, ಚೆನ್ನೈನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth