ಹಲ್ಲಿ ಬಿದ್ದಿದ್ದ ಪಲಾವ್ ಸೇವಿಸಿ ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ!
24/07/2024
ರಾಯಚೂರು: ತಾಲೂಕಿನ ಚಂದ್ರಬಂಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಲ್ಲಿ ಬಿದ್ದ ಪಲಾವ್ ಸೇವಿಸಿ 50 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಬೆಳಗ್ಗೆ ಪಲಾವ್ ಸೇವನೆ ಮಾಡಿದ ಬಳಿಕ ಈ ಘಟನೆ ನಡೆದಿದೆ. ಮಕ್ಕಳಿಗೆ ಪೂರೈಸಲಾದ ಪಲಾವ್ ನಲ್ಲಿ ಹಳ್ಳಿಯ ಚಿಕ್ಕಚಿಕ್ಕ ಮಾಂಸದ ತುಂಡುಗಳು ಬಂದಿವೆ ಎಂದು ಹೇಳಲಾಗಿದೆ.
ಊಟ ಮಾಡಿದ ಕೆಲ ಹೊತ್ತಲ್ಲೇ ಮಕ್ಕಳಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಕ್ಕಳನ್ನು ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಹಿನ್ನೆಲೆ ಡಿಹೆಚ್ ಓ ಡಾ.ಸುರೇಂದ್ರ ಬಾಬು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಟ್ಟು 300 ಮಕ್ಕಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: