3:58 PM Wednesday 15 - October 2025

50 ರೂಪಾಯಿ ಕಳೆದು ಹೋಗಿದೆ, ಸಿಕ್ಕಿದವರು ಇವರ ಬಳಿ ಕೊಡಿ!

50 rupayi story
05/01/2022

ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಕಥೆ. ಬಹುಶಃ ಇದನ್ನು ಯಾರು ಬರೆದಿದ್ದಾರೋ ಗೊತ್ತಿಲ್ಲ. ಆದರೆ ಈ ಕಥೆಯಲ್ಲಿರುವ ಮೌಲ್ಯ ಅಂತೂ ಇಂದಿನ ಮಾನವ ಜಗತ್ತಿಗೆ ಅತ್ಯಗತ್ಯವಾಗಿದೆ.

ಆ ಕಥೆ ಹೀಗಿದೆ:

ಮನೆಗೆ ಹೊರಟಿದ್ದೆ ಎಲೆಕ್ರ್ಟಿಕ್ ಕಂಬಕ್ಕೆ ಯಾರೋ ಒಂದು ಬೋರ್ಡ್ ನೇತು ಹಾಕಿದ್ದರು. ಅದರಲ್ಲಿ ಏನು ಬರೆದಿರಬಹುದು ಎಂದು ಕುತೂಹಲ ಉಂಟಾಯಿತು ಹತ್ತಿರ ಹೋಗಿ ನೋಡಿದರೆ ಅದರಲ್ಲಿ ಬರೆದಿತ್ತು-

ಈ ರಸ್ತೆಯಲ್ಲೆಲ್ಲೊ ಐವತ್ತು ರುಪಾಯಿಯನ್ನು ಕಳೆದುಕೊಂಡಿದ್ದೇನೆ ನಿಮಗೆ ಯಾರಿಗಾದರೂ ಸಿಕ್ಕರೆ, ಈ ವಿಳಾಸದಲ್ಲಿರುವ ನನಗೆ ತಲುಪಿಸಿ. ನನ್ನ ಕಣ್ಣಿನ ದ್ರಷ್ಟಿ ತುಸು ಮಂಜಾಗಿದೆ ದಯವಿಟ್ಟು ಸಹಾಯ ಮಾಡಿ.

ನಾನು ಆವಿಳಾಸವನ್ನು ಗಮನಿಸಿದೆ ಅಲ್ಲಿರುವ ವ್ಯಕ್ತಿಯನ್ನು ನೋಡಬೇಕು ಎಂದು ಬಲವಾಗಿ ಅನಿಸಿತು. ಆವಿಳಾಸದ ಬಳಿ ಹೋದಾಗ ಗುಡಿಸಲಿನಂತ ಮನೆಯ ಮುಂದೆ ಮುದುಕಿಯೊಬ್ಬಳು ಕುಳಿತಿದ್ದಳು. ಆಕೆ ಬಸವಳಿದಿದ್ದಳು ನಾನು ಬರುತ್ತಿರುವ ಸದ್ದನ್ನು ಕೇಳಿ ಯಾರು? ಎಂದಳು ನಾನು ಅಜ್ಜಿ ,ಈ ದಾರಿಯಲ್ಲಿ ಬರುವಾಗ ಐವತ್ತು ರೂಪಾಯಿ ಸಿಕ್ಕಿತು. ಕರೆಂಟ್ ಕಂಬದ ಮೇಲೆ ಬರೆದ ಬೋರ್ಡ್ ನೋಡಿದೆ. ನಿಮಗೆ ಕೊಟ್ಟು ಹೋಗೋಣ ಎಂದು ಬಂದೆ ಅಂದೆ.

ನನ್ನ ಮಾತು ಕೇಳಿ ಅವಳ ಕಣ್ಣು ತೇವವಾದವು. ಈಗಾಗಲೆ 40-50 ಮಂದಿ ಬಂದು ದಾರಿಯಲ್ಲಿ ತಮಗೆ ಐವತ್ತು ರೂಪಾಯಿ ಸಿಕ್ಕಿತೆಂದು ಕೊಟ್ಟು ಹೋಗಿದ್ದಾರೆ. ಆಷ್ಟಕ್ಕೂ ಆ ಕರೆಂಟ್ ಕಂಬದ ಮೇಲೆ ನಾನು ಬೋರ್ಡ್ ನೇತು ಹಾಕಿಲ್ಲ ನನಗೆ ಓದಲು ಬರೆಯಲು ಬರುವುದಿಲ್ಲ, ಎಂದಳು . ಪರವಾಗಿಲ್ಲ ಐವತ್ತು ರುಪಾಯಿ ಇಟ್ಟುಕೊಳ್ಳಿ ಎಂದೆ.

ನೀವು ಇಲ್ಲಿಂದ ಹೋಗುವಾಗ ಆ ಕಂಬದ ಮೇಲೆ ಬರೆದ ಬೋರ್ಡ್ ತೆಗೆದುಹಾಕಿ ಎಂದು ನನ್ನನ್ನು ವಿನಂತಿಸಿದಳು. ಸೋಜಿಗವೆಂದರೆ ತನ್ನನ್ನು ನೋಡಲು ಬಂದವರಿಗೆಲ್ಲ ಬೋರ್ಡ್ ಅನ್ನು ತೆಗೆದು ಹಾಕುವಂತೆ ಹೇಳುತ್ತಿದ್ದಳು. ಆದರೆ ಯಾರೂ ಹಾಗೆ ಮಾಡಿರಲಿಲ್ಲ.

ನಾನು ವಾಪಸ್ ಬರುವಾಗ ಯೋಚಿಸಲಾರಂಬಿಸಿದೆ, ಕರೆಂಟ್ ಕಂಬದ ಮೇಲೆ ಯಾರು ಈ ಬೋರ್ಡ್ ತಗುಲಿ ಹಾಕಿರಬಹುದು… ತನ್ನನ್ನು ನೋಡಲು ಬಂದವರಿಗೆಲ್ಲ ಅದನ್ನು ತೆಗೆದು ಹಾಕಿ ಎಂದು ಹೇಳಿದರೂ ಯಾರೂ ತೆಗೆದು ಹಾಕಲಿಲ್ಲ…

ಯಾರೋ ಒಬ್ಬನಿಗೆ ಆ ಮುದುಕಿಗೆ ಸಹಾಯ ಮಾಡಬೇಕೇಂದು ಅನಿಸಿರಬೇಕು, ಆತ ಬೋರ್ಡ್ ಅನ್ನು ಹಾಕಿರಬೇಕು…  ಒಬ್ಬರಿಗೆ ಸಹಾಯ ಮಾಡಬೇಕು ಅನಿಸಿದರೆ ಎಷ್ಟೋಂದು ದಾರಿಗಳಿವೆಯಲ್ಲ.

ಅಷ್ಟೊತ್ತಿಗೆ ಯಾರೋ ಕರೆದಂತಾಯಿತು. ಸಾರ್ ಈ ಅಡ್ರೆಸ್ ನಲ್ಲಿರುವ ವ್ಯಕ್ತಿಯನ್ನು ಬೇಟಿ ಮಾಡುವುದು ಹೇಗೆ? ಅಲ್ಲಿಗೆ ಹೋಗುವುದು ಹೇಗೆ? ನನಗೆ ದಾರಿಯಲ್ಲಿ ಐವತ್ತು ರೂಪಾಯಿ ಸಿಕ್ಕಿತು ಅವರಿಗೆ ತಲುಪಿಸಬೇಕಾಗಿದೆ ಎಂದು ದಾರಿಹೋಕನೊಬ್ಬ ಹೇಳಿದ ನಾನು ಗದ್ಗದಿತನಾದೆ.

ಮಾನವೀಯತೆಯ ಒರತೆ ಮಾತ್ರ ಎಂದಿಗೂ ಬತ್ತುವುದಿಲ್ಲ ಅದು ಎಲ್ಲಾದರೂ ಜಿನುಗುತ್ತಲೆ ಇರುತ್ತದೆ ಎಂಬ ಮಾತು ಎಷ್ಟು ಸತ್ಯ ಅಲ್ಲವೇ…?

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ಒಮಿಕ್ರಾನ್ ಗೆ ಮೊದಲ ಬಲಿ!

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ |  ನಜ್ಜುಗುಜ್ಜಾದ ಕಾರು

ಎಲ್ಲಾ ಕಡೆ ವೀಕೆಂಡ್ ಕರ್ಫ್ಯೂ ಯಾಕೆ? | ಸರ್ಕಾರದ ನಿರ್ಧಾರದ ಬಗ್ಗೆ ಸಚಿವ ಈಶ್ವರಪ್ಪ ಅಸಮಾಧಾನ

ಶಿಲುಬೆ ತೆರವಿಗೆ ಬಜರಂಗದಳ ಯತ್ನ: ಪೊಲೀಸರ ಜೊತೆಗೆ ಘರ್ಷಣೆ!

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ!

ಇತ್ತೀಚಿನ ಸುದ್ದಿ

Exit mobile version