ಯಡಿಯೂರಪ್ಪ ರಾಜಕೀಯ ಜೀವನದ 50 ವರ್ಷ: ಮೇ 3ರಂದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಲ್ಲಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಅವರಿಗೆ ಅಭಿನಂದನೆ ಸಲ್ಲಿಸಲು ಮೇ 3ರಂದು ಬೃಹತ್ ಸಮಾವೇಶವನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.
ಈ ಹಿಂದೆ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ನಡೆದಿದ್ದ ‘ಸಿದ್ದರಾಮೋತ್ಸವ’ದ ಮಾದರಿಯಲ್ಲೇ ಈ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಈ ಸಮಾವೇಶದ ಮೂಲಕ ಯಡಿಯೂರಪ್ಪ ಅವರು ಪಕ್ಷದ ಒಳಗೆ ಮತ್ತು ಹೊರಗೆ ತಮ್ಮ ಶಕ್ತಿಯನ್ನು ಪ್ರದರ್ಶಿಸುವ ಜೊತೆಗೆ ಮಹತ್ವದ ರಾಜಕೀಯ ಸಂದೇಶ ರವಾನಿಸುವ ಸಾಧ್ಯತೆಯಿದೆ.
ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಕಾರ್ಯಕ್ರಮದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ.
ಈ ಐತಿಹಾಸಿಕ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ರಾಷ್ಟ್ರೀಯ ಮಟ್ಟದ ನಾಯಕರಿಗೂ ಆಹ್ವಾನ ನೀಡುವ ಸಾಧ್ಯತೆಯಿದೆ.
ಶಿಕಾರಿಪುರದ ಪುರಸಭೆ ಸದಸ್ಯರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಬಿ.ಎಸ್. ಯಡಿಯೂರಪ್ಪ ಅವರು, ಇಂದು ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಈ 50 ವರ್ಷಗಳ ಸುದೀರ್ಘ ಪಯಣವನ್ನು ಸಂಭ್ರಮಿಸಲು ಚಿತ್ರದುರ್ಗ ವೇದಿಕೆಯಾಗಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























