ವಿಶ್ವಕಪ್ ಟ್ರೋಫಿ ಗೆದ್ದ ಭಾರತದ ಮಹಿಳಾ ತಂಡಕ್ಕೆ 51 ಕೋಟಿ ಬಹುಮಾನ
ನವದೆಹಲಿ: ಚೊಚ್ಚಲ ವಿಶ್ವಕಪ್ ಟ್ರೋಫಿ ಗೆದ್ದ ಭಾರತದ ವನಿತೆಯರ ತಂಡಕ್ಕೆ 51 ಕೋಟಿ ನಗದು ಬಹುಮಾನವನ್ನು ಬಿಸಿಸಿಐ ಘೋಷಿಸಿದೆ.
ಈ ಕುರಿತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸೋಮವಾರ ಮಾಹಿತಿ ನೀಡಿದ್ದಾರೆ.
ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಹರ್ಮನ್ ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ತಂಡವು 52 ರನ್‌ಗಳಿಂದ ದಕ್ಷಿಣ ಆಫ್ರಿಕಾ ಎದುರು ಜಯಭೇರಿ ಬಾರಿಸಿದೆ. ಶಫಾಲಿ ವರ್ಮಾ ಮತ್ತು ದೀಪ್ತಿ ಶರ್ಮಾ ಅವರ ಆಲ್ ರೌಂಡ್ ಆಟದ ಬಲದಿಂದ ಭಾರತ ವನಿತೆಯರ ತಂಡವು ಮೊದಲ ಸಲ ವಿಶ್ವಕಪ್ ಜಯಿಸಿದೆ.
ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಬಿಸಿಸಿಐ 51 ಕೋಟಿ ನಗದು ಬಹುಮಾನ ನೀಡಲಿದೆ. ಈ ಬಹುಮಾನವು ಎಲ್ಲಾ ಆಟಗಾರ್ತಿಯರು, ಸಹಾಯಕ ಸಿಬ್ಬಂದಿ ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿಯನ್ನು ಒಳಗೊಂಡಿರಲಿದೆ ಎಂದು ದೇವಜಿತ್ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























