ಹಿಜಾಬ್ ಪರ ಪ್ರತಿಭಟನೆ: 58 ವಿದ್ಯಾರ್ಥಿನಿಯರ ಅಮಾನತು - Mahanayaka

ಹಿಜಾಬ್ ಪರ ಪ್ರತಿಭಟನೆ: 58 ವಿದ್ಯಾರ್ಥಿನಿಯರ ಅಮಾನತು

hijab protest
19/02/2022


Provided by

ಶಿರಾಳಕೊಪ್ಪ: ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಹೈಕೋರ್ಟ್‌ ಆದೇಶ, ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್‌ ಪರವಾಗಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ 58 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನಾ ರ‍್ಯಾಲಿ ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ತಹಶೀಲ್ದಾರ್, ಪೋಲಿಸ್ ಅಧಿಕಾರಿಗಳು, ಡಿಡಿಪಿಯು, ಸಿಡಿಸಿ ಸಮಿತಿಯವರು ಕಾನೂನಿನ ಬಗ್ಗೆ ಮೂರು ದಿನಗಳಿಂದ ಮನವರಿಕೆ ಮಾಡಿಕೊಟ್ಟರೂ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ಇತರೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ಅಮಾನತು ತೆರವಾಗುವವರೆಗೂ ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸುವಂತಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯರು ಕಾಲೇಜಿಗೆ ಗೈರು ಹಾಜರಾಗುತ್ತಿದ್ದು, ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗಿದೆ. ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಹೈಕೋರ್ಟ್ ಆದೇಶಗಳಿದ್ದರೂ, ಇತರ ಧರ್ಮೀಯ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಗುರುತುಗಳೊಂದಿಗೆ ಪ್ರವೇಶಿಸಿದರೂ ಅವರನ್ನು ತಡೆಯುತ್ತಿಲ್ಲ, ಹಿಜಾಬ್ ನ್ನು ಮಾತ್ರವೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹಿಜಾಬ್ ಪರ ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ?

ಗಾಂಜಾ ಸೇದಲು ಪ್ರೇರಣೆ ನೀಡಿದ್ರಾ ಪುನೀತ್ ಕೆರೆಹಳ್ಳಿ?

ಯೇಸುವಿನ ಪ್ರತಿಮೆ ಧ್ವಂಸ: ಕ್ರಿಶ್ಚಿಯನ್ನರ ಮೇಲಿನ ದಾಳಿಗೆ ಉದಾಹರಣೆ: ಕ್ಯಾಥೋಲಿಕ್ ಬಿಷಪ್ ಗಳಿಂದ ಬೇಸರ

ಮುಸ್ಲಿಮರ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಅನ್ಯಕೋಮಿನ ಐವರು ಪೊಲೀಸ್ ವಶಕ್ಕೆ

ಕುಂಕುಮ ಇಟ್ಟು ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಕಾಲೇಜು!

ಇತ್ತೀಚಿನ ಸುದ್ದಿ