ಕೊರೊನಾ ಎರಡನೇ ಅಲೆಯಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಎಷ್ಟು ಗೊತ್ತಾ? - Mahanayaka

ಕೊರೊನಾ ಎರಡನೇ ಅಲೆಯಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಎಷ್ಟು ಗೊತ್ತಾ?

doctors
02/06/2021

ನವದೆಹಲಿ: ಕೊವಿಡ್ 19 ಸಾಂಕ್ರಾಮಿಕ ರೋಗದ 2ನೇ ಅಲೆಯ ಸಂದರ್ಭದಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಪಟ್ಟಿಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನೀಡಿದೆ.


Provided by

ಕೊವಿಡ್ 19 ಎರಡನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ಒಟ್ಟು 594 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಯಲ್ಲಿಯೇ ವೈದ್ಯರ ಸಾವು ದಾಖಲಾಗಿದ್ದು, ದೆಹಲಿಯ 107 ವೈದ್ಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದರೆ,  ಬಿಹಾರದಲ್ಲಿ 96 ವೈದ್ಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ 67 ವೈದ್ಯರು,  ಕರ್ನಾಟಕದಲ್ಲಿ 8 ಮಂದಿ ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದೆ ಎಂದು ಎಎನ್ ಐ ವರದಿ ಮಾಡಿದೆ.

ಕೊರೊನಾ ಮೊದಲ ಅಲೆಯಲ್ಲಿ ದೇಶದಲ್ಲಿ 748 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಆದರೆ ಇದೀಗ  2ನೇ ಅಲೆ ಆರಂಭವಾಗಿ 3 ತಿಂಗಳಲ್ಲಿಯೇ 594 ಮಂದಿ ವೈದ್ಯರು ಜೀವಕಳೆದುಕೊಂಡಿದ್ದಾರೆ.  ಪ್ರಮುಖವಾಗಿ ಆರೋಗ್ಯ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಕಷ್ಟು ಮಂದಿ ಸಿಬ್ಬಂದಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಐಎಂ ಅಧ್ಯಕ್ಷ ಡಾ.ಜೆಎ ಜಯಲಾಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ