ಯುಪಿ ನಾಗರಿಕ ಸೇವೆಗಳ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ: 6 ಮಂದಿಯ ಬಂಧನ

ಈ ವರ್ಷದ ಆರಂಭದಲ್ಲಿ ಪರಿಶೀಲನಾ ಅಧಿಕಾರಿಗಳು ಮತ್ತು ಸಹಾಯಕ ಪರಿಶೀಲನಾ ಅಧಿಕಾರಿಗಳ ಹುದ್ದೆಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಆರು ಮಂದಿಯನ್ನು ಬಂಧಿಸಿದೆ.
ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಫೆಬ್ರವರಿ 11 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಸಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿಬಂದ ನಂತರ ರಾಜ್ಯ ಸರ್ಕಾರ ಮಾರ್ಚ್ 2 ರಂದು ಅದನ್ನು ರದ್ದುಗೊಳಿಸಿತ್ತು.
ಬಂಧಿತರನ್ನು ಮಧ್ಯಪ್ರದೇಶದ ಭೋಪಾಲ್ ನಿವಾಸಿ ಸುನಿಲ್ ರಘುವಂಶಿ, ಬಿಹಾರದ ಮಧುಬನಿ ನಿವಾಸಿ ಸುಭಾಷ್ ಪ್ರಕಾಶ್, ಪ್ರಯಾಗ್ರಾಜ್ ನಿವಾಸಿಗಳಾದ ವಿಶಾಲ್ ದುಬೆ ಮತ್ತು ಸಂದೀಪ್ ಪಾಂಡೆ, ಬಿಹಾರದ ಗಯಾ ನಿವಾಸಿ ಅಮರ್ಜೀತ್ ಶರ್ಮಾ ಮತ್ತು ಬಲ್ಲಿಯಾ ನಿವಾಸಿ ವಿವೇಕ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಪ್ರಯಾಗ್ ರಾಜ್ ನಲ್ಲಿ ಈ ಬಂಧನಗಳನ್ನು ಮಾಡಲಾಗಿದೆ ಎಂದು ಎಸ್ ಟಿಎಫ್ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್ ಮೈಂಡ್ ರಾಜೀವ್ ನಯನ್ ಮಿಶ್ರಾ ಈಗಾಗಲೇ ಜೈಲಿನಲ್ಲಿದ್ರೆ ಗ್ಯಾಂಗ್ ನ ಭಾಗವೆಂದು ಹೇಳಲಾದ ಮಹಿಳೆ ಪರಾರಿಯಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth