ಫರೀದಾಬಾದ್‌ ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ಪೊಲೀಸ್ ಠಾಣೆಯಲ್ಲಿ ಸ್ಫೋಟ: 6 ಪೊಲೀಸರು ಸಾವು - Mahanayaka
3:04 PM Saturday 15 - November 2025

ಫರೀದಾಬಾದ್‌ ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ಪೊಲೀಸ್ ಠಾಣೆಯಲ್ಲಿ ಸ್ಫೋಟ: 6 ಪೊಲೀಸರು ಸಾವು

j&k police station
15/11/2025

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಶಂಕಿತ ಉಗ್ರ ಡಾ.ಮುಜಮ್ಮಿಲ್ ಗನಿಯ ಬಾಡಿಗೆ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ 360 ಕಿ.ಲೋ. ಸ್ಫೋಟಕಗಳ ಪರಿಶೀಲನೆ ನಡೆಸುವ ವೇಳೆ ಘಟನೆ ಸಂಭವಿಸಿದೆ.

ಘಟನಾ ಸ್ಥಳದಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವು ಗುರುತಿಸಲಾಗದ ಸ್ಥಿತಿಯಲ್ಲಿದೆ. ಮೃತದೇಹಗಳನ್ನು ಶ್ರೀನಗರದಲ್ಲಿರುವ ಪೊಲೀಸ್‌ ಕಂಟ್ರಲ್ ರೂಮ್‌ ಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಠಾಣೆಯಲ್ಲಿದ್ದ 24 ಪೊಲೀಸರು ಹಾಗೂ 3 ನಾಗರಿಕರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ