ದುರಂತ: ಆಂಧ್ರಪ್ರದೇಶದಲ್ಲಿ ಟ್ರ್ಯಾಕ್ಟರ್ ಗೆ ಟ್ರಕ್ ಡಿಕ್ಕಿ: 6 ಮಂದಿ ಸಾವು

ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸುವಾಗ ವ್ಯಾನ್ ಕಂಟೈನರ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ ಘಟನೆ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರಕ್ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸೀತಾನಪಲ್ಲಿ ಬಳಿ ಪಲ್ಟಿಯಾಗಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಮಚಿಲಿಪಟ್ಟಣಂ ಡಿಎಸ್ಪಿ ಸುಭಾನಿ ತಿಳಿಸಿದ್ದಾರೆ.
ಐದು ಜನರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಅಪಘಾತದಿಂದಾಗಿ ಈ ಮಾರ್ಗದಲ್ಲಿ ಎರಡು ಕಿಲೋಮೀಟರ್ ಗಿಂತಲೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಪಘಾತದಲ್ಲಿ ಭಾಗಿಯಾಗಿರುವ ಜನರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth